ಭಾರತೀಯ ರೈಲ್ವೆ ಇಲಾಖೆಯಲ್ಲಿ 3591 ಹುದ್ದೆಗಳು: ಅರ್ಜಿ ಆಹ್ವಾನ

ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಪರೀಕ್ಷೆ ಇಲ್ಲದೇ ನೇರ ನೇಮಕಾತಿ ನಡೆಯಲಿದ್ದು, 10ನೇ ತರಗತಿ ಹಾಗೂ ಐಟಿಐ ಅಂಕದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ವಿದ್ಯಾರ್ಹತೆ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಯು 10ನೇ ತರಗತಿ ಹಾಗೂ ಐಟಿಐ ಪರೀಕ್ಷೆ ಉತ್ತೀರ್ಣರಾಗಿರಬೇಕು.

ವಯೋಮಿತಿ: ಗರಿಷ್ಠ 24 ವರ್ಷ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ 5 ವರ್ಷಗಳ ಸಡಿಲಿಕೆ ಇದೆ. ಇತರ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆ ನೀಡಲಾಗಿದೆ.

ಅರ್ಜಿ ಶುಲ್ಕ: ಅರ್ಜಿ ಶುಲ್ಕ ₹ 100, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂನ್ 24, 2021
ಹೆಚ್ಚಿನ ಮಾಹಿತಿಗೆ: www.rrc-wr.com