ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ನ JN.1 ರೂಪಾಂತರಿ ಸೋಂಕು ಹೆಚ್ಚಳವಾಗುತ್ತಿದ್ದು, ಕೋವಿಡ್ ಆತಂಕದ ಹಿನ್ನೆಲೆಯಲ್ಲಿ ಮತ್ತೊಮ್ಮೆ ರಾಜ್ಯದಲ್ಲಿ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತಿದೆ.
ಜ.02 ರಿಂದ ರಾಜ್ಯದಲ್ಲಿ ಕೋರ್ಬಿವ್ಯಾಕ್ಸ್ ಲಸಿಕೆಯನ್ನು ನೀಡಲು ಸರ್ಕಾರ ಮುಂದಾಗಿದೆ ಎನ್ನಲಾಗಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಲಸಿಕೆ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.
ರಾಜ್ಯದಲ್ಲಿ ಮುನ್ನೆಚ್ಚರಿಕಾ ಲಸಿಕೆ(ಬೂಸ್ಟರ್ ಡೋಸ್) ಯನ್ನು ಶೇ. 27% ಜನರು ಮಾತ್ರ ಪಡೆದಿದ್ದಾರೆ. ರಾಜ್ಯದಲ್ಲಿ 1.5 ಕೋಟಿಗೂ ಅಧಿಕ ಜನರು ಮುನ್ನೆಚ್ಚರಿಕಾ ವ್ಯಾಕ್ಸಿನ್ ಪಡೆಯಲು ಅಹರ್ತೆ ಹೊಂದಿದ್ದಾರೆ. ಇವರ್ಯಾರೂ 3 ನೇ ಡೋಸ್ ಲಸಿಕೆ ಪಡೆದಿಲ್ಲ. ಈ ಹಿನ್ನೆಲೆಯಲ್ಲಿ ಈಗ ಮತ್ತೆ ಮುನ್ನೆಚ್ಚರಿಕಾ ಲಸಿಕೆ ನೀಡಲು ಆರೋಗ್ಯ ಇಲಾಖೆ ಮುಂದಾಗಿದೆ. ಪ್ರಾಥಮಿಕ ಹಂತದಲ್ಲಿ 30 ಸಾವಿರ ಕೋರ್ಬಿವಾಕ್ಸ್ ಲಸಿಕೆ ಖರೀದಿಗೆ ಸರ್ಕಾರ ಮುಂದಾಗಿದೆ. ಒಂದಕ್ಕಿಂತ ಹೆಚ್ಚು ಆರೋಗ್ಯ ಸಮಸ್ಯೆ ಹಾಗೂ ಗಂಭೀರ ಆರೋಗ್ಯ ಸಮಸ್ಯಯಿಂದ ಬಳಲುತ್ತಿರುವವರು ಮೂರನೇ ಡೋಸ್ ಪಡೆಯವಂತೆ ಆರೋಗ್ಯ ಇಲಾಖೆ ಮನವಿ ಮಾಡಿದೆ.