ನವದೆಹಲಿ: ಸರ್ಕಾರಿ ಸ್ವಾಮ್ಯದ 12 ಬ್ಯಾಂಕ್‌ಗಳಲ್ಲಿ ಒಟ್ಟು 41,177 ಹುದ್ದೆಗಳು ಖಾಲಿ ಇವೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳಿಗೆ ಒಟ್ಟಾರೆ 8.05 ಲಕ್ಷ ಹುದ್ದೆಗಳು ಮಂಜೂರಾಗಿದ್ದು, ಅವುಗಳಲ್ಲಿ 41,177 (ಶೇಕಡ 5ರಷ್ಟು) ಹುದ್ದೆಗಳು ಖಾಲಿ ಇವೆ. ಇದರಲ್ಲಿ ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿಯೇ (ಎಸ್‌ಬಿಐ) ಗರಿಷ್ಠ 8,544 ಹುದ್ದೆಗಳು ಖಾಲಿ ಇವೆ ಎಂದು ಅವರು ಸೋಮವಾರ ಮಾಹಿತಿ ನೀಡಿದ್ದಾರೆ.