ದೇಶದಲ್ಲಿ ಕೊರೊನಾ ಸೋಂಕು ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 16,922 ಪ್ರಕರಣಗಳು ದಾಖಲಾಗಿದೆ. ಒಂದೇ ದಿನದಲ್ಲಿ ಅತಿ ಹೆಚ್ಚು ಹೊಸ ಪ್ರಕರಣಗಳು ವರದಿಯಾಗಿವೆ.
ಭಾರತದಲ್ಲಿ ಕೊರೊನಾ ಸೋಂಕಿಗೆ ಒಂದೇ ದಿನ 418 ಜನರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ದೇಶದಲ್ಲಿ ಒಟ್ಟು 4,73,105 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಮೃತರ ಸಂಖ್ಯೆಯು 14,894ಕ್ಕೆ ಏರಿಕೆಯಾಗಿದೆ.
1,86,514 ಸಕ್ರಿಯ ಪ್ರಕರಣಗಳಿದ್ದು, 2,71,697 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.