ಕಡಿಯಾಳಿಯಲ್ಲಿ 42ನೇ ವರ್ಷದ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ

ಉಡುಪಿ: ಕಡಿಯಾಳಿ ಮಾತೃ ಮಂಡಳಿಯ ವತಿಯಿಂದ 42ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ಭಕ್ತಿಭಾವದಿಂದ ನಡೆಯಿತು.

ಈ ಸಂದರ್ಭದಲ್ಲಿ ಮಾತೃ ಮಂಡಳಿಯ ಸದಸ್ಯರು ಸೇರಿದಂತೆ ನೂರಾರು ಮಹಿಳೆಯರು ಸಾಮೂಹಿಕವಾಗಿ ವ್ರತಾಚರಣೆ ನಡೆಸಿ, ಶ್ರೀ ವರಮಹಾಲಕ್ಷ್ಮೀ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು.

ಮಹಿಳೆಯರು ಸಾಂಪ್ರದಾಯಿಕ ಉಡುಗೆ ತೊಟ್ಟು, ಅರಿಶಿನ–ಕುಂಕುಮ, ಹೂವು ಹಾಗೂ ವಿವಿಧ ಪೂಜಾ ಸಾಮಗ್ರಿಗಳೊಂದಿಗೆ ಪಾಲ್ಗೊಂಡರು. ಕಾರ್ಯಕ್ರಮದಲ್ಲಿ ಸ್ಥಳೀಯ ಭಕ್ತರು ಉಪಸ್ಥಿತರಿದ್ದರು.