ಜುಲೈ 8ರಂದು ಮುದ್ರಾಡಿ ಧರ್ಮಯೋಗಿ ಮೋಹನ್‌ ಸ್ವಾಮೀಜಿಯ 4ನೇ ಆರಾಧನಾ ಮಹೋತ್ಸವ

ಉಡುಪಿ: ಶ್ರೀ ಕ್ಷೇತ್ರ ಮುದ್ರಾಡಿ ಅಭಯಹಸ್ತೆ ಶ್ರೀ ಆದಿಶಕ್ತಿ ಮತ್ತು ನಂದಿಕೇಶ್ವರ ದೇವಸ್ಥಾನದ ಆಶ್ರಯದಲ್ಲಿ ಜುಲೈ 8ರಂದು ಧರ್ಮಯೋಗಿ ಮೋಹನ ಸ್ವಾಮೀಜಿ ಅವರ 4ನೇ ವರ್ಷದ ಆರಾಧನಾ ಮಹೋತ್ಸವ ನಡೆಯಲಿದೆ ಎಂದು ಶ್ರೀಕ್ಷೇತ್ರ ಮುದ್ರಾಡಿಯ ಧರ್ಮಾಧಿಕಾರಿ ಸುಕುಮಾರ ಮೋಹನ್ ತಿಳಿಸಿದರು.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 7ಗಂಟೆಯಿಂದ ಚಿಕ್ಕಮಗಳೂರಿನ ಕೆ.ಎಸ್.ನಿತ್ಯಾನಂದ ಸ್ವಾಮೀಜಿ ಮಾರ್ಗದರ್ಶನದಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನಗಳು ನಡೆಯಲಿದೆ. ಬೆಳಿಗ್ಗೆ 8ಗಂಟೆಗೆ ಶ್ರೀ ಆದಿಶಕ್ತಿ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ಜರುಗಲಿದೆ. ಬೆಳಿಗ್ಗೆ 9.30ಕ್ಕೆ ಪಟ್ಲ ಸತೀಶ ಶೆಟ್ಟಿ ಬಳಗದವರಿಂದ ಯಕ್ಷಗಾನ ತಾಳಮದ್ದಳೆ ‘ಅಂಗದ ಸಂಧಾನ’ ನಡೆಯಲಿದೆ. ಕಲಾವಿದರಾದ ಉಜಿರೆ ಅಶೋಕ ಭಟ್‌ ಮತ್ತು ಗಣೇಶ ಶೆಟ್ಟಿ ಕನ್ನಡಿಕಟ್ಟೆ ಭಾಗವಹಿಸಲಿದ್ದಾರೆ ಎಂದರು.

ವಿನಯ್‌ ಗುರೂಜಿ ಅವರಿಗೆ ಧರ್ಮಯೋಗಿ ಸಮ್ಮಾನ ಪ್ರದಾನ:
ಅಂದು ಮಧ್ಯಾಹ್ನ 12ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಧರ್ಮಯೋಗಿ ಮೋಹನ್‌ ಸ್ವಾಮೀಜಿಯ ಸಂಸ್ಮರಣೆಗಾಗಿ ನೀಡುವ ಧರ್ಮಯೋಗಿ ಸಮ್ಮಾನ ಗೌರವವನ್ನು ವಿನಯ್‌ ಗುರೂಜಿ ಅವರಿಗೆ ಪ್ರದಾನ ಮಾಡಲಾಗುವುದು. ಬಜಗೋಳಿ ರವೀಂದ್ರ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು.