ಒಬ್ಬ ವ್ಯಕ್ತಿಗೆ 1 ತಿಂಗಳಿಗೆ 5 ಕೆಜಿ ಅಕ್ಕಿ ಸಾಕು, 10 ಕೆಜಿ ಕೊಟ್ಟರೆ ಬೊಕ್ಕಸಕ್ಕೆ ಹೊರೆ; ಆಹಾರ ಸಚಿವ ಉಮೇಶ್ ಕತ್ತಿ

ಚಾಮರಾಜನಗರ: ಆಹಾರ ಇಲಾಖೆಯಲ್ಲಿ 4 ಕೋಟಿ 1 ಲಕ್ಷ ಫಲಾನುಭವಿಗಳಿದ್ದು, ಹೆಚ್ಚುವರಿ ಆಹಾರ ಧಾನ್ಯದಿಂದ ಸರ್ಕಾರದ ಬೊಕ್ಕಸಕ್ಕೆ ಹೊರೆಯಾಗುತ್ತದೆ. ನನ್ನ ಪ್ರಕಾರ ಒಬ್ಬ ವ್ಯಕ್ತಿಗೆ 1 ತಿಂಗಳಿಗೆ 5 ಕೆಜಿ ಅಕ್ಕಿ ಸಾಲುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಉಮೇಶ್ ಕತ್ತಿ ವಿವಾದಾತ್ಮ ಹೇಳಿಕೆ ನೀಡಿದ್ದಾರೆ.

ನಾವೀಗ ಆಹಾರ ಭದ್ರತೆ ಯೋಜನೆಯಲ್ಲಿ‌ 5 ಕೆಜಿ ಅಕ್ಕಿ ಕೊಡುತ್ತೇವೆ. ಸಿದ್ದರಾಮಯ್ಯ ಪದೇಪದೇ 10 ಕೆಜಿ ಅಕ್ಕಿ ಕೊಡುತ್ತೇವೆ. ನನ್ನ ಪ್ರಕಾರ ಒಬ್ಬ ವ್ಯಕ್ತಿಗೆ 1 ತಿಂಗಳಿಗೆ 5 ಕೆಜಿ ಅಕ್ಕಿ ಸಾಕು. ಹೆಚ್ಚುವರಿ ಆಹಾರ ಧಾನ್ಯ ನೀಡುವುದರಿಂದ ಸರ್ಕಾರದ ಬೊಕ್ಕಸಕ್ಕೆ ಹೊರೆಯಾಗುತ್ತದೆ ಎಂದು ಅವರು ಹೇಳಿದರು.