ಬೆಂಗಳೂರು: ರಾಜ್ಯದಲ್ಲಿ ಸೆಪ್ಟೆಂಬರ್ನಿಂದ ಪ್ರತಿ ದಿನ 5 ಲಕ್ಷ ಜನರಿಗೆ ಕೋವಿಡ್ ಲಸಿಕೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಬೆಂಗಳೂರಿನಲ್ಲಿ ಇಂದು ನಡೆದ ‘ವ್ಯಾಕ್ಸಿನೇಟ್ ಇಂಡಿಯಾ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸದ್ಯ 2.5 ರಿಂದ 4 ಲಕ್ಷ ಜನರಿಗೆ ಪ್ರತಿ ದಿನ ನೀಡಲಾಗುತ್ತಿದೆ. 1.5 ಕೋಟಿ ಡೋಸ್ ಲಸಿಕೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದೇವೆ ಎಂದರು.