ಬೆಂಗಳೂರು: ಆರ್ಥಿಕವಾಗಿ ಹಿಂದುಳಿದ ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡಲು ಪ್ರತಿ ಜೋಡಿಗೆ 50 ಸಾವಿರ ರೂ. ಕೊಡುವ ಕಾರ್ಯಕ್ರಮಕ್ಕೆ ಸರ್ಕಾರದ ಮಂಜೂರಾತಿ ದೊರೆತಿದೆ.
ಪ್ರತಿ ಜೋಡಿಗೆ 50 ಸಾವಿರ ರೂಪಾಯಿ:
ರಾಜ್ಯ ಬಜೆಟ್‌ನಲ್ಲಿ ಈ ಕುರಿತು ಘೋಷಿಸಲಾಗಿತ್ತು. ಇದೀಗ ಸರ್ಕಾರಿ ಆದೇಶ ಹೊರಬಿದ್ದಿದೆ. ಈ ಯೋಜನೆಯಡಿಯಲ್ಲಿ ಆರ್ಥಿಕವಾಗಿ ಹಿಂದುಳಿದ ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡಲು ಸ್ವಯಂಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಾಮೂಹಿಕ ವಿವಾಹ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ 50 ಸಾವಿರ ರೂ. ಮತ್ತು ಕಾರ್ಯಕ್ರಮ ಆಯೋಜಿಸುವ ಸಂಸ್ಥೆಗೆ, ಪ್ರತಿ ಜೋಡಿಗೆ 5 ಸಾವಿರ ರೂ. ನೀಡುವ ಬಗ್ಗೆ ಸರ್ಕಾರ ಆದೇಶ ಹೊರಡಿಸಿದೆ. ಜೊತೆಗೆ 5 ಸಾವಿರ ಜೋಡಿ ಮಿತಿವರೆಗೂ ಸಾಮೂಹಿಕ ವಿವಾಹ ಕಾರ್ಯಕ್ರಮ ಮಾಡಬಹುದಾಗಿದೆ ಎಂದು ತಿಳಿಸಿದೆ.












