ಮಂಗಳೂರು: ಸ್ಪಂದನಾ ಟ್ರಸ್ಟ್ ಇನ್ಫೆಂಟ್ ಮೇರಿಸ್ ಕಾನ್ವೆಂಟ್ ಜೆಪ್ಪು ಇದರ 51 ನೇ ವಾರ್ಷಿಕೋತ್ಸವವನ್ನು ಹಾಗೂ ಕ್ರಿಸ್ಮಸ್ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಭಗಿನಿ ಸಿಲ್ವಿಯಾ ಫೆರ್ನಾಂಡಿಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಸ್ಥೆಯು ಮಕ್ಕಳ ಹಾಗೂ ಕುತುಂಬದ ಅಭಿವೃದ್ದಿಗಾಗಿ ಶ್ರಮಿಸುತ್ತಿದೆ. ಅಭಿವೃದ್ದಿ ಕಾರ್ಯಕ್ರಮಗಳನ್ನು ಆಯೋಜಿಸಿ ಹಾಗೂ ಸರಕಾರದಿಂದ ಸಿಗುವ ಸವಲತ್ತುಗಳ ಮಾಹಿತಿ ನೀಡಿ ಎಲ್ಲರನ್ನೂ ಸ್ವಾವಲಂಬಿಗಳಾಗಿಸುವುದು ಸಂಸ್ಥೆಯ ಉದ್ದೇಶ ಎಂದರು.
ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಯೆನೆಪೋಯ ಮೆಡಿಕಲ್ ಕಾಲೇಜ್ ನ ಪ್ರಾಧ್ಯಾಪಕ ಸಿಡ್ನಿ ಡಿ’ಸೋಜ, ಟ್ರಸ್ಟಿನ ಕಾರ್ಯವೈಖರಿ ಹಾಗೂ ಶ್ರಮಕ್ಕೆ ಭಗವಂತನ ಕೃಪೆ ಇರಲಿ ಎಂದು ಹಾರೈಸಿದರು.
ವಂದನೀಯ ಗುರು ವಿನ್ಸೆಂಟ್ ಡಿ ಸೋಜ, ಎಲ್ಲರ ಉತ್ತಮ ಭವಿಷ್ಯಕ್ಕಾಗಿ ಶುಭ ಹಾರೈಸಿದರು.
ಟ್ರಸ್ಟಿನ ಆಡಳಿತಾಧಿಕಾರಿ ಭಗಿನಿ ಹೆಲೆನ್ ಫೆರ್ನಾಂಡಿಸ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಮನೋರಂಜನಾ ಕಾರ್ಯಕ್ರಮಗಳು ಜನರನ್ನು ರಂಜಿಸಿದವು.












