ಮಣಿಪಾಲ: 67ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಮ್ಮಿಕೊಂಡಿರುವ “ಕೋಟಿ ಕಂಠ ಗಾಯನ” ಕಾರ್ಯಕ್ರಮದ ಪ್ರಯುಕ್ತ ಶುಕ್ರವಾರ ಜಿಲ್ಲಾಡಳಿತ ಉಡುಪಿ ಜಿಲ್ಲೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಉಡುಪಿ ಜಿಲ್ಲೆ, ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಇವರ ಸಹಯೋಗದೊಂದಿಗೆ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ನಲ್ಲಿ ನಡೆದ “ಕೋಟಿ ಕಂಠ ಗಾಯನ” ಕಾರ್ಯಕ್ರಮದಲ್ಲಿ ಶಾಸಕ ರಘುಪತಿ ಭಟ್ ರವರು ಭಾಗವಹಿಸಿದರು.
5500 ವಿದ್ಯಾರ್ಥಿಗಳು ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಭಾಗವಹಿಸಿ ಕನ್ನಡ ಗೀತೆಗಳನ್ನು ಹಾಡಿದರು.
ಈ ಸಂದರ್ಭದಲ್ಲಿ ಮಾಹೆ ಮಣಿಪಾಲದ ಸಹ ಕುಲಾಧಿಪತಿಗಳಾದ ಎಚ್. ಎಸ್ ಬಲ್ಲಾಲ್, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಮಾಹೆ ಸಂಸ್ಥೆಯ ಮುಖ್ಯಸ್ಥರು, ಬೋಧಕ ಬೋಧಕರ ಸಿಬ್ಬಂದಿಗಳು, ಉಡುಪಿ ಮಣಿಪಾಲ ಪರಿಸರದ ವಿವಿಧ ಶಿಕ್ಷಣ ಸಂಸ್ಥೆಗಳ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.












