ಪರಶುರಾಮ ಥೀಂ ಪಾರ್ಕ್‌ ಕಾಮಗಾರಿ ಶೀಘ್ರ ಪೂರ್ಣಗೊಳಿಸುವಂತೆ 6 ಗ್ರಾಮ ಪಂಚಾಯತ್ ಅಧ್ಯಕ್ಷರಿಂದ ತಹಶೀಲ್ದಾರ್‌ಗೆ ಮನವಿ

ಕಾರ್ಕಳ: ತಾಲ್ಲೂಕಿನ ಬೈಲೂರು ಉಮಿಕ್ಕಳ ಬೆಟ್ಟದ ಪರಶುರಾಮ ಥೀಂ ಪಾರ್ಕ್‌ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ಪ್ರವಾಸೋದ್ಯಮಕ್ಕೆ ಅನುವು ಮಾಡಿಕೊಡಿ ಎಂದು 6 ಗ್ರಾಮ ಪಂಚಾಯಿತಿ ಅಧ್ಯಕ್ಷರು ಸೋಮವಾರ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

ಎರ್ಲಪಾಡಿ, ನೀರೆ, ಬೈಲೂರು, ಪಳ್ಳಿ, ಕುಕ್ಕುಂದೂರು, ಹಿರ್ಗಾನ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ತಹಶೀಲ್ದಾ‌ರ್ ಡಾ.ಪ್ರತಿಭಾ ಆ‌ರ್. ಅವರ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಜಿಲ್ಲೆಯಲ್ಲಿ ನಿರ್ಮಾಣಗೊಂಡಿರುವ ಪರಶುರಾಮ ಥೀಮ್ ಪಾರ್ಕ್ ಪ್ರವಾಸೋದ್ಯಮ ದೃಷ್ಟಿಯಲ್ಲಿ ಅತಿ ಮಹತ್ವದ್ದೆನಿಸಿದೆ. ಹೀಗಾಗಿ ಬಾಕಿಯಿರುವ ಕಾಮಗಾರಿ ಆರಂಭಿಸಿ ಶೀಘ್ರ ಮುಕ್ತಾಯಗೊಳಿಸಿ ಸಾರ್ವಜನಿಕರಿಗೆ, ಪ್ರವಾಸಿಗರಿಗೆ ಭೇಟಿ ನೀಡಲು ಅವಕಾಶ ಮಾಡಿಕೊಡಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.