69ನೇ ಅಖಿಲ ಭಾರತ ಸಹಕಾರ ಸಪ್ತಾಹ: ಎಂ.ಎನ್. ರಾಜೇಂದ್ರ ಕುಮಾರ್ ಅವರಿಗೆ ಸನ್ಮಾನ

ಉಚ್ಚಿಲ: 69ನೇ ಅಖಿಲ ಭಾರತ ಸಹಕಾರ ಸಪ್ತಾಹದ ಉದ್ಘಾಟನಾ ಸಮಾರಂಭ ಹಾಗೂ ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ ಅಭಿನಂದನಾ ಸಮಾರಂಭವು ಸೋಮವಾರದಂದು ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಸಭಾಂಗಣದಲ್ಲಿ ನೆರವೇರಿತು.

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ನಿ., ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ., ಉಡುಪಿ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿ., ಮಂಗಳೂರು, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ರಿ., ಮಂಗಳೂರು ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ, ಮಂಗಳೂರು; ದ.ಕ. ಹಾಗೂ ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ನಿ., ಮಹಾಲಕ್ಷ್ಮಿ ಕೋ-ಆಪರೇಟಿವ್ ಬ್ಯಾಂಕ್ ಲಿ. ಹಾಗೂ ಉಡುಪಿ ಜಿಲ್ಲೆಯ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಗಳು, ಸಹಕಾರ ಇಲಾಖೆ, ಉಡುಪಿ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯ ಸಮಸ್ತ ಸಹಕಾರ ಸಂಘಗಳು ಹಾಗೂ ಸೌಹಾರ್ದ ಸಹಕಾರಿಗಳ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಎಂ.ಎನ್. ರಾಜೇಂದ್ರ ಕುಮಾರ್ ದಂಪತಿಯನ್ನು ಬೆಳ್ಳಿಯ ಶಂಖ ಹಾಗೂ ಭಾವಚಿತ್ರ ನೀಡಿ ಶಾಲು ಹೊದೆಸಿ ಸನ್ಮಾನಿಸಲಾಯಿತು.

ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಕಾಪು ಶಾಸಕ ಲಾಲಾಜಿ ಮೆಂಡನ್, ಬೈಂದೂರು ಶಾಸಕ ಬಿ. ಎಂ. ಸುಕುಮಾರ್ ಶೆಟ್ಟಿ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ನಿರ್ದೇಶಕ ದೇವಿಪ್ರಸಾದ್ ಶೆಟ್ಟಿ ಬೆಳಪು, ಉಡುಪಿ ಜಿಲ್ಲಾ ಮೀನು ಮಾರಾಟಗಾರರ ಫೆಡರೇಷನ್ ಅಧ್ಯಕ್ಷ ಯಶ್ ಪಾಲ್ ಸುವರ್ಣ, ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕ ಮಂಜುನಾಥ್ ಎಸ್.ಕೆ., ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ.ಪಿ. ಸುಚರಿತ ಶೆಟ್ಟಿ, ಕೆ.ಎಂ.ಎಫ್. ನಿರ್ದೇಶಕ ಕಾಪು ದಿವಾಕರ ಶೆಟ್ಟಿ, ಸಹಕಾರ ಸಂಘಗಳ ಜಂಟಿ ನಿಬಂಧಕ ಡಾ. ಉಮೇಶ್ ಜಿ., ಲಕ್ಷ್ಮೀನಾರಾಯಣ ಜಿ.ಎನ್., ಗಣೇಶ್ ಮಯ್ಯ, ಎಸ್ ಸಿಡಿಸಿಸಿ ಬ್ಯಾಂಕ್ ಡಿಜಿಎಂ ಗೋಪಿನಾಥ್ ಭಟ್, ಜಗದೀಶ್ ಅಂಚನ್ ಸೂಟರ್ ಪೇಟೆ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಪ್ತಾಹದ ಅಂಗವಾಗಿ ಉದ್ಯಾವರದಲ್ಲಿ ವಾಹನ ಜಾಥಾಕ್ಕೆ ಜಿಲ್ಲಾ ಸಹಕಾರಿ ಯೂನಿಯನ್ ನಿ. ಉಡುಪಿ ಇದರ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ಚಾಲನೆ ನೀಡಿದರು.