ಉಡುಪಿ: ನಗರದ ಡಾ.ಟಿಎಂಎ ಪೈ ಕೊವಿಡ್ ಆಸ್ಪತ್ರೆಯಲ್ಲಿ ಕಳೆದ 15 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಬೈಂದೂರಿನ 70 ವರ್ಷದ ವೃದ್ಧರೊಬ್ಬರು ಇಂದು ಮೃತಪಟ್ಟಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ.
ಇವರು ತೀವ್ರ ಅಸ್ವಸ್ಥತೆಯಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ವೆಂಟಿಲೇಟರ್ ನಲ್ಲಿರಿಸಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ವಾರ್ಡ್ ಗೆ ಶಿಫ್ಟ್ ಮಾಡಲಾಗಿತ್ತು. ಆದರೆ ಇಂದು ಅವರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆಯ ಮೂಲಗಳಿಂದ ತಿಳಿದುಬಂದಿದೆ.