ಉಡುಪಿ: ಮನೆಯೊಂದರಿಂದ 73 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

ಉಡುಪಿ: ನಗರದ ಲಾಲಾಲಜಪತ್​ ರಾಯ್​ ಮಾರ್ಗದ 4ನೇ ಅಡ್ಡರಸ್ತೆಯಲ್ಲಿರುವ ಮನೆಯೊಂದಕ್ಕೆ ಭಾನುವಾರ ರಾತ್ರಿ ನುಗ್ಗಿದ ಕಳ್ಳರು 73 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿರುವ ಘಟನೆ ವರದಿಯಾಗಿದೆ.

ಕಳ್ಳರು ಮನೆಯ ಮುಂಬಾಗಿಲಿನ ಮತ್ತು ಮಾಸ್ಟರ್​ ಬೆಡ್​ ರೂಮಿನ ಬಾಗಿಲುಗಳ ಬೀಗ ಮುರಿದು, ಕಪಾಟುಗಳನ್ನು ತೆರೆದು ಅದರಲ್ಲಿದ್ದ ಅಂದಾಜು 1,882 ಗ್ರಾಂ ತೂಕದ ಸುಮಾರು ರೂ. 66,36,300 ಮೌಲ್ಯದ ಚಿನ್ನಾಭರಣಗಳು ಹಾಗೂ 7,450 ಗ್ರಾಂ ತೂಕದ ರೂ. 6,70,500 ಮೌಲ್ಯದ ಬೆಳ್ಳಿಯ ಸ್ವತ್ತುಗಳನ್ನು ಕಳವು ಮಾಡಿಕೊಂಡು ಹೋಗಿದ್ದಾರೆ.

ಈ ಬಗ್ಗೆ ಉಡುಪಿ ನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.