ಸಂಸತ್ ಭವನ ಉದ್ಘಾಟನೆ ಸ್ಮರಣಾರ್ಥ 75 ರೂ. ನಾಣ್ಯ ಬಿಡುಗಡೆ

ನವದೆಹಲಿ: ನೂತನ ಸಂಸತ್ ಭವನ ಉದ್ಘಾಟನೆಯ ಸ್ಮರಣಾರ್ಥ 75 ರೂ.ಯ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದಾಗಿ ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ನಾಣ್ಯದ ವಿಶೇಷತೆ:75 ರೂ.ಯ ವಿಶೇಷ ನಾಣ್ಯದ ಒಂದು ಬದಿಯಲ್ಲಿ ಅಶೋಕ ಸ್ತಂಭದ ಸಿಂಹದ ಲಾಂಛನ ಇರಲಿದ್ದು, ಅದರ ಕೆಳಗಡೆ ‘ಸತ್ಯಮೇವ ಜಯತೆ’ ಎಂದು ಬರೆಯಲಾಗುತ್ತದೆ.

ಎಡಭಾಗದಲ್ಲಿ ‘ಭಾರತ್’ ಎಂದು ದೇವನಾಗರಿ ಲಿಪಿ ಹಾಗೂ ಬಲ ಭಾಗದಲ್ಲಿ ‘ಇಂಡಿಯಾ’ ಎಂದು ಇಂಗ್ಲಿಷ್‌ನಲ್ಲಿ ಬರೆಯಲಾಗುತ್ತದೆ. ಸಿಂಹದ ಲಾಂಛನದ ಕೆಳಗಡೆ ಮುಖಬೆಲೆಯನ್ನು ತೋರಿಸುವ ರೂ. ಚಿಹ್ನೆಯೊಂದಿಗೆ 75 ಎಂದು ಇಂಗ್ಲಿಷ್ ಅಂಕೆಯಲ್ಲಿ ಬರೆಯಲಾಗುತ್ತದೆ ‘ಸಂಸದ್ ಸಂಕುಲ್’ ಎಂದು ಅದರ ಮೇಲ್ಭಾಗದಲ್ಲಿ ದೇವನಾಗರಿ ಲಿಪಿಯಲ್ಲಿ ಹಾಗೂ ‘ಪಾರ್ಲಿಮೆಂಟ್ ಕಾಂಪ್ಲೆಕ್ಸ್’ ಎಂದು ಇಂಗ್ಲಿಷ್‌ನಲ್ಲಿ ಅದರ ಕೆಳ ಭಾಗದಲ್ಲಿ ಬರೆಯಲಾಗುತ್ತದೆ.