ಉಡುಪಿ ಜಿಲ್ಲಾ ಕಾಂಗ್ರೆಸ್ ಹಾಗೂ ಸೇವಾದಳದಿಂದ 75ನೇ ಸ್ವಾತಂತ್ರ್ಯೋತ್ಸವ

ಉಡುಪಿ: ಕಾಂಗ್ರೆಸ್ ಪಕ್ಷದ ದೇಶಭಕ್ತಿಯನ್ನು ಪ್ರಶ್ನಿಸುವ ಯಾವ ನೈತಿಕತೆಯೂ ಬಿಜೆಪಿಗೆ ಉಳಿದಿಲ್ಲ. ದೇಶಭಕ್ತಿ ಹಾಗೂ ರಾಷ್ಟ್ರಾಭಿಮಾನದಿಂದಲೇ ಕಾಂಗ್ರೆಸ್ ಬ್ರಿಟೀಷರ ವಿರುದ್ಧ ಹೋರಾಡಿ ಸ್ವಾತಂತ್ರ್ಯ ಗಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿತ್ತು. ದೇಶ ಇಂದು ಸದೃಡಗೊಂಡಿದ್ದರೆ ಅದಕ್ಕೆ ಮೂಲ ಕಾರಣ ಕಾಂಗ್ರೆಸ್. ದೇಶ ಇಂದು ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸುವ ಸಂದರ್ಭದಲ್ಲಿ ಹಲವಾರು ಸಂಕಷ್ಟಗಳನ್ನು ಎದುರಿಸುತ್ತಿದೆ. ಸರಕಾರದ ಕೋವಿಡ್ ನಿರ್ವಹಣೆಯಲ್ಲಿಯ ವೈಫಲ್ಯ, ರೈತರ ಸಮಸ್ಯೆ, ನಿರುದ್ಯೋಗ ಸಮಸ್ಯೆ ಹಾಗೂ ಬೆಲೆ ಏರಿಕೆಗಳಿಂದ ದೇಶ ತತ್ತರಿಸಿದೆ ಎಂದು ಮಾಜಿ ಸಚಿವ ವಿನಯ ಕುಮಾರ್ ಸೊರಕೆಯವರು ಹೇಳಿದರು.

ಅವರು ಉಡುಪಿ ಜಿಲ್ಲಾ ಕಾಂಗ್ರೆಸ್, ಜಿಲ್ಲಾ ಸೇವಾದಳ ಹಾಗೂ ಉಡುಪಿ ಬ್ಲಾಕ್ ಕಾಂಗ್ರೆಸ್, ಸರ್ವಿಸ್ ಬಸ್‌ಸ್ಟ್ಯಾಂಡ್ ಕ್ಲಾಕ್ ಟವರ್ ಗಾಂಧಿ ಚೌಕ ಬಳಿ ಆಯೋಜಿಸಿದ್ದ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಧ್ವಜಾರೋಹಣಗೈದು ಮಾತನಾಡುತ್ತಿದ್ದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅವರು ಮಾತನಾಡಿ, ಪ್ರಸ್ತುತ ದೇಶವನ್ನು ಕಾಡುತ್ತಿರುವ, ಬಡತನ ಜಾತಿವಾದ ಮತ್ತು ಕೋಮುವಾದಗಳಿಂದ ಮುಕ್ತವಾದ ಪರಿಶುದ್ಧ ನವ ಭಾರತವನ್ನು ನಿರ್ಮಿಸಲು ನಾವೆಲ್ಲಾ ಒಗ್ಗೂಡೋಣ ಎಂದರು.

ಈ ಸಂದರ್ಭದಲ್ಲಿ ಮುಖಂಡರಾದ ದಿನೇಶ್ ಪುತ್ರನ್, ಬಿ. ನರಸಿಂಹ ಮೂರ್ತಿ, ಭಾಸ್ಕರ್ ರಾವ್ ಕಿದಿಯೂರು, ಪ್ರಖ್ಯಾತ್ ಶೆಟ್ಟಿ, ಶಬ್ಬೀರ್ ಅಹ್ಮದ್, ಹರೀಶ್ ಕಿಣಿ, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಉದ್ಯಾವರ ನಾಗೇಶ್ ಕುಮಾರ್, ಕಿಶೋರ್ ಎರ್ಮಾಳ್, ಹಬೀಬ್ ಅಲಿ, ಕೀರ್ತಿ ಶೆಟ್ಟಿ, ಸದಾಶಿವ ಕಟ್ಟೆಗುಡ್ಡೆ, ಯತೀಶ್ ಕರ್ಕೆರಾ, ಬಾಲಕೃಷ್ಣ ಪೂಜಾರಿ, ಪ್ರಶಾಂತ್ ಜತ್ತನ್ನ, ಲೂಯಿಸ್ ಲೋಬೊ, ಸುರೈಯಾ ಅಂಜುಮ್, ಶಾಂತಾರಾಮ್ ಸಾಲ್ವಾಂಕರ್, ಕೃಷ್ಣಮೂರ್ತಿ ಆಚಾರ್ಯ, ಉಪೇಂದ್ರ ಗಾಣಿಗ, ಶರತ್ ನಾಯ್ಕ್, ರಾಜೇಶ್, ಪ್ರಕಾಶ್ ಕೊಡವೂರು ಉಪಸ್ಥಿತರಿದ್ದರು.