ಎಸ್.ಡಿ.ಎಂ ಆಯುರ್ವೇದ ಕಾಲೇಜಿನಲ್ಲಿ 7 ನೇ ರಾಷ್ಟ್ರೀಯ ಆಯುರ್ವೇದ ದಿನ ಅದ್ದೂರಿ ಆಚರಣೆ

ಉಡುಪಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು, ಮತ್ತು ಆಸ್ಪತ್ರೆಯಲ್ಲಿ 7 ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಂಶುಪಾಲೆ ಡಾ ಮಮತಾ ಕೆ.ವಿ ಮಾತನಾಡಿ, ಆಯುರ್ವೇದವೇ ಜೀವನದ ಸಂಸ್ಕೃತಿ ಮತ್ತು ಸಂಸ್ಕಾರವಾಗಿರಬೇಕು ಎಂದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಮಾತನಾಡಿ, ಮಾನವ ಮತ್ತು ಪ್ರಕೃತಿಯ ನಡುವಿನ ಸಂಬಂಧವನ್ನು ಸವಿಸ್ತಾರವಾಗಿ ವಿವರಿಸಿ ಮಾನವ ಪ್ರಕೃತಿ ಜೊತೆ ಸಹಬಾಳ್ವೆ ನಡೆಸಬೇಕು ಎಂದರು.

ಈ ಸಂದರ್ಭದಲ್ಲಿ ಜನಪರ ವೈದ್ಯ ಸಂಶೋಧನಾ ಕೇಂದ್ರದ ವತಿಯಿಂದ ಪ್ರತಿ ವರ್ಷವೂ ನೀಡಲಾಗುವ ‘ಜನಪರ ವೈದ್ಯ ಸಿರಿ ರಾಷ್ಟ್ರೀಯ ಪ್ರಶಸ್ತಿ’ಯನ್ನು ಶ್ರೀ ರಾಮ ಮಂಜ ಮರಾಠಿ ಇವರಿಗೆ ನೀಡಿ ಗೌರವಿಸಲಾಯಿತು.

‘ಹರ್ ದಿನ್ ಹರ್ ಘರ್ ಆಯುರ್ವೇದ’ ಎಂಬ ಧ್ಯೇಯೋದ್ದೇಶದೊಂದಿಗೆ ಒಂದು ತಿಂಗಳುಗಳ ಕಾಲ ಹತ್ತು ಹಲವು ಕಾರ್ಯಕ್ರಮಗಳನ್ನು ಸಂಸ್ಥೆಯ ವತಿಯಿಂದ ಆಯೋಜಿಸಲಾಗಿದ್ದು, ಇದರ ವರದಿಯನ್ನು ವಾಚಿಸಲಾಯಿತು. ಇದೇ ಹೊತ್ತಿನಲ್ಲಿ ‘ನಿದಿರೆ’ ಶೀರ್ಷಿಕೆಯನ್ನು ಹೊಂದಿರುವ ಆಯುರ್ವೇದ ಹಾಡನ್ನು ಬಿಡುಗಡೆಗೊಳಿಸಲಾಯಿತು.

ಡಾ. ನಿರಂಜನ್ ರಾವ್ ಸ್ವಾಗತಿಸಿದರು. ವೈದ್ಯಕೀಯ ಅಧೀಕ್ಷಕ ಡಾ. ನಾಗರಾಜ್ ವಂದಿಸಿದರು.

ಎಸ್.ಡಿ.ಎಂ ಆಯುರ್ವೇದ ಫಾರ್ಮಸಿಯ ಜನರಲ್ ಮ್ಯಾನೇಜರ್ ಡಾ. ಮುರಳೀಧರ್ ಬಲ್ಲಾಳ್ ಉಪಸ್ಥಿತರಿದ್ದರು.

ಕಾರ್ಯಕ್ರಮದ ಬಳಿಕ ನೂರಕ್ಕೂ ಹೆಚ್ಚು ಆಯುರ್ವೇದಾಸಕ್ತರಿಗೆ ಆಯುರ್ವೇದ ಕುರಿತ ಮಾಹಿತಿ ನೀಡಿ ಜಾಗೃತಿ ಮೂಡಿಸಲಾಯಿತು.

ಜನಪರ ವೈದ್ಯ ಸಂಶೋಧನಾ ಕೇಂದ್ರದ ಸದಸ್ಯ ಡಾ. ರವಿಕೃಷ್ಣ, ಡಾ.ಅರ್ಹಂತ್ ಕುಮಾರ್, ಡಾ.ರವಿ, ಡಾ. ನಾಗರತ್ನ ಹಾಗೂ ಡಾ. ಸುಶ್ಮಿತ್ ಸಂಪೂರ್ಣ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಿಕೊಟ್ಟರು.