ಬೆಂಗಳೂರು: ವ್ಯಾಪಾರಿಯನ್ನು ಅಡ್ಡಗಟ್ಟಿ 80 ಲಕ್ಷ ರೂ. ದರೋಡೆ: 8 ಮಂದಿ ವಶಕ್ಕೆ

ಬೆಂಗಳೂರು: ವ್ಯಾಪಾರಿಯೊಬ್ಬರನ್ನು ಅಡ್ಡಗಟ್ಟಿ 80 ಲಕ್ಷ ರೂಪಾಯಿ ದರೋಡೆ ಮಾಡಿದ್ದ ಆರೋಪದಡಿ ಕೇರಳದ 8 ಮಂದಿಯನ್ನು ಮಹದೇವಪುರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ರಖಂ ವ್ಯಾಪಾರಿಯೊಬ್ಬರು ಅಂಗಡಿಗಳಿಂದ ಸಂಗ್ರಹಿಸಿದ್ದ ವ್ಯಾಪಾರದ ಹಣವನ್ನು ಕಾರಿನಲ್ಲಿಟ್ಟುಕೊಂಡು ಹೋಗಿದ್ದರು. ಅವರನ್ನು ಅಡ್ಡಗಟ್ಟಿದ್ದ ಆರೋಪಿಗಳು, ಕೊಲೆ ಬೆದರಿಕೆಯೊಡ್ಡಿ, ಮಾರಕಾಸ್ತ್ರಗಳನ್ನು ತೋರಿಸಿ ದರೋಡೆ ಮಾಡಿಕೊಂಡು ಪರಾರಿಯಾಗಿದ್ದರು. ಈ ಬಗ್ಗೆ ವ್ಯಾಪಾರಿ ದೂರು ನೀಡಿದ್ದರು ಎಂದು ತಿಳಿದು ಬಂದಿದೆ. ವ್ಯಾಪಾರಿಯ ಪರಿಚಯವಿರುವ ವ್ಯಕ್ತಿಗಳೇ ಕೃತ್ಯ ಎಸಗಿರುವ ಅನುಮಾನವಿದೆ. ಕೆಲ ಪುರಾವೆಗಳನ್ನು ಸಂಗ್ರಹಿಸಿ 8 ಮಂದಿಯನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.