ಎಸ್.ಎಂ.ಎಸ್. ಪದವಿಪೂರ್ವ ಕಾಲೇಜು, ಬ್ರಹ್ಮಾವರದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ಬ್ರಹ್ಮಾವರ: ಎಸ್.ಎಂ.ಎಸ್. ಪದವಿಪೂರ್ವ ಕಾಲೇಜು, ಬ್ರಹ್ಮಾವರದಲ್ಲಿ ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಲಯನ್ ಐವನ್ ದೋನಾತ್ ಸುವಾರಿಸ್ ವಹಿಸಿ ಧ್ವಜಾರೋಹಣ ನೆರವೇರಿಸಿದರು.

ಬಳಿಕ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು ಸ್ವಾತಂತ್ರ್ಯ ದಿನದ ಮಹತ್ವ, ದೇಶಭಕ್ತಿ ಹಾಗೂ ಯುವಜನರ ಜವಾಬ್ದಾರಿಗಳ ಕುರಿತು ವಿವರಿಸಿದರು.

ಈ ಸಂದರ್ಭದಲ್ಲಿ ಭಾರತೀಯ ವಾಯುಪಡೆಯ ನಿವೃತ್ತ ವಿಂಗ್ ಕಮಾಂಡರ್ ರಾಮ್ ಪವಿತ್ರ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಅವರು ವಿದ್ಯಾರ್ಥಿಗಳಿಗೆ ದೇಶಸೇವೆಯ ಮಹತ್ವ ಹಾಗೂ ಶಿಸ್ತುಬದ್ಧ ಜೀವನದ ಕುರಿತು ಪ್ರೇರಣಾದಾಯಕ ಸಂದೇಶ ನೀಡಿದರು.

ಕಾರ್ಯಕ್ರಮದಲ್ಲಿ ಕನ್ನಡ ಮಾಧ್ಯಮದ ಮುಖ್ಯಸ್ಥರಾದ ಮೇಜರ್ ವಿಷ್ಣುದಾಸ್ ಉಪಾಧ್ಯ ಹಾಗೂ ಆಂಗ್ಲ ಮಾಧ್ಯಮದ ಮುಖ್ಯಸ್ಥೆಯಾದ ಶ್ರೀಮತಿ ವತ್ಸಲ ಶೆಟ್ಟಿ ಉಪಸ್ಥಿತರಿದ್ದರು.

ಉಪನ್ಯಾಸಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಸ್ವಾತಂತ್ರ್ಯ ದಿನವನ್ನು ಅರ್ಥಪೂರ್ಣವಾಗಿ ಆಚರಿಸಿದರು.