ಕೃಷಿ ಇಲಾಖೆಯಲ್ಲಿದೆ 890 ಖಾಲಿ ಹುದ್ದೆಗಳು; ಅರ್ಜಿ ಸಲ್ಲಿಸಲು ಸಂಪೂರ್ಣ ಮಾಹಿತಿ ಇಲ್ಲಿದೆ

ಬೆಂಗಳೂರು: ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿಗಳ ಒಟ್ಟು 890 ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಅರ್ಜಿಗಳನ್ನು ಆಹ್ವಾನಿಸಿದೆ. ಅಭ್ಯರ್ಥಿಗಳು ಮೇ 10ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಈ ಕುರಿತು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಮಾಹಿತಿ ನೀಡಿದ್ದು, ಕಲ್ಯಾಣ ಕರ್ನಾಟಕ ಹಾಗೂ ಇತರ ಮೂಲ ವೃಂದದ ಅಭ್ಯರ್ಥಿಗಳಿಗೂ ಮೇ 10ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಅರ್ಜಿ ಶುಲ್ಕ ಪಾವತಿಗೆ ಮೇ 12 ಕೊನೆಯ ದಿನವಾಗಿದೆ.

ಉಳಿಕೆ ಮೂಲ ವೃಂದದ ಗ್ರೂಪ್-ಬಿ ವಿಭಾಗದ 632 ಹುದ್ದೆಗಳ (81 ಕೃಷಿ ಅಧಿಕಾರಿ, 551 ಸಹಾಯಕ ಕೃಷಿ ಅಧಿಕಾರಿ) ಲಿಖಿತ ಪರೀಕ್ಷೆ ಜೂನ್ 7ರಂದು ನಡೆಯಲಿದೆ. ಕಲ್ಯಾಣ ಕರ್ನಾಟಕ ವೃಂದದ 258 ಹುದ್ದೆಗಳ (40 ಕೃಷಿ ಅಧಿಕಾರಿ, 218 ಸಹಾಯಕ ಕೃಷಿ ಅಧಿಕಾರಿ) ಪರೀಕ್ಷೆ ಜೂನ್ 14ರಂದು ನಡೆಯಲಿದೆ. ಎರಡೂ ವೃಂದದ ಅಭ್ಯರ್ಥಿಗಳಿಗೆ ಕನ್ನಡ ಪರೀಕ್ಷೆ ಜೂನ್ 6ರಂದು ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವಂತೆ ಸೂಚಿಸಲಾಗಿದೆ.