ಬೆಂಗಳೂರು: ರಾಜ್ಯ ಸರ್ಕಾರವು ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ವಾಯುವ್ಯ ಮತ್ತು ಈಶಾನ್ಯ ಸಾರಿಗೆ ಸಂಸ್ಥೆಗಳ ಸಿಬ್ಬಂದಿಯ ವೇತನ ಭರಿಸಲು 961 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲು ನಿರ್ಧರಿಸಿದೆ. ಇದರಿಂದ ನಾಲ್ಕೂ ಸಾರಿಗೆ ಸಂಸ್ಥೆಯ ನೌಕರರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.
ಜೂನ್ ಮತ್ತು ಜುಲೈ ತಿಂಗಳ ಸಂಬಳಕ್ಕಾಗಿ 426 ಕೋಟಿ ರೂಪಾಯಿಗಳನ್ನು ಬಿಡುಗಡೆಗೊಳಿಸಲಾಗಿದೆ. ಈ ನಿರ್ಧಾರದಿಂದ, ಒಟ್ಟು ನಾಲ್ಕು ತಿಂಗಳ ವೇತನ ಭರಿಸಲು ಅನುಕೂಲವಾಗಲಿದೆ.