ದಕ್ಷಿಣ ಕನ್ನಡ ಜಿಲ್ಲೆಯ ಎಸ್ಪಿ ಸಿ.ಬಿ.ರಿಷ್ಯಂತ್ ವರ್ಗಾವಣೆ, ನೂತನ ಎಸ್ಪಿಯಾಗಿ ಯತೀಶ್ ಎನ್ ನೇಮಕ.

ಮಂಗಳೂರು: ಕರ್ನಾಟಕ ರಾಜ್ಯ ಸರ್ಕಾರವು 25 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಮಂಗಳವಾರ ತಡರಾತ್ರಿ ಆದೇಶ ಹೊರಡಿಸಿದೆ.

ಈ ವರ್ಗಾವಣೆಗಳ ಪೈಕಿ, ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಸಿ ಬಿ ರಿಷ್ಯಂತ್ಅವರನ್ನು ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ, ಅಲ್ಲಿ ಅವರು ಈಗ ವೈರ್‌ಲೆಸ್ ವಿಭಾಗಕ್ಕೆ ಎಸ್‌ಪಿಯಾಗಿ ಸೇವೆ ಸಲ್ಲಿಸಲಿದ್ದಾರೆ.

ಮೇ 2023 ರಲ್ಲಿ ರಿಷ್ಯಂತ್ ಅವರು ದ.ಕ ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಇದೀಗ ರಿಶ್ಯಾಂತ್‌ ಅವರಿಂದ ಅಧಿಕಾರ ವಹಿಸಿಕೊಂಡವರು ಈ ಹಿಂದೆ ಮಂಡ್ಯ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಯತೀಶ್ ಎನ್. ಇವರು 2016 ರ ಕರ್ನಾಟಕ ಕೇಡರ್‌ನ ಐಪಿಎಸ್ ಅಧಿಕಾರಿ.