ಉಡುಪಿ: ಪ್ರಸಕ್ತ ಸಾಲಿನಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಅನುಷ್ಠಾನಗೊಳಿಸಲಾದ ಫಲಾನುಭವಿ ಆಧಾರಿತ ಯೋಜನೆಗಳಾದ ಮೆರಿಟ್ ವಿದ್ಯಾರ್ಥಿಗಳಿಗಾಗಿ ಪ್ರೋತ್ಸಾಹಧನ, ಸ್ವಯಂ ಉದ್ಯೋಗಕ್ಕಾಗಿ ಆಧಾರ ಯೋಜನೆ, ಮರಣ ಪರಿಹಾರ ನಿಧಿ, ವೈದ್ಯಕೀಯ ಪರಿಹಾರ ನಿಧಿ, ಪ್ರತಿಭೆ ಯೋಜನೆ, ಸಾಧನೆ ಯೋಜನೆ, ನಿರುದ್ಯೋಗ ಭತ್ಯೆ, ಅಂಧ ಮಹಿಳೆಗಾಗಿ ಶಿಶುಪಾಲನಾ ಭತ್ಯೆ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ಟಾಪ್ ಯೋಜನೆ, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆ, ಸಾಧನ ಸಲಕರಣೆಗಳ ಯೋಜನೆ, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಯೋಜನೆ ಹಾಗೂ ದೃಷ್ಠಿದೋಷ ಹೊಂದಿರುವ ವಿಕಲಚೇತನರಿಗೆ ಬ್ರೈಲ್ ಕಿಟ್ ಯೋಜನೆಗಳ ಸೌಲಭ್ಯ ಪಡೆಯಲು ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಸೇವಾಸಿಂಧು ವೆಬ್ಸೈಟ್ https://sevasindhu.karnataka.gov.in/Sevasindhu/Departmentservices Kannada ಮೂಲಕ ಅರ್ಹ ವಿಕಲಚೇತನ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ತಳ ಅಂತಸ್ತು, ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣ ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 0820-2574810/ 2574811 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.