ಬೆಳ್ತಂಗಡಿ: ಇಲಿ ಪಾಷಣ ಸೇವಿಸಿ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು.

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಬಳಿ ಇಲಿ ಪಾಷಣ ಸೇವಿಸಿ ಪ್ರಥಮ ಪಿಯುಸಿ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರು ಪುದುವೆಟ್ಟು ಗ್ರಾಮದ ಕಲ್ಲಾಜೆ ನಿವಾಸಿ ವೆಂಕಟೇಶ್ ಅವರ ಪುತ್ರಿ ಅನಿತಾ (17).

ಈಕೆ ನಾಲ್ಕು ದಿನದ ಹಿಂದೆ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಗೆ ಯತ್ನಿಸಿದ್ದಳು ತೀವ್ರ ಅಸ್ವಸ್ಥಗೊಂಡಿದ್ದು, ಆಕೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ 3 ದಿನಗಳ ಕಾಲ ಜೀವನ್ಮರಣ ಹೋರಾಟ ನಡೆಸಿದ ಅನಿತಾ ಜು.3ರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.