ಉಡುಪಿ: ಸರ್ಕಾರವು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮುಖೇನ ನಾಡು –ನುಡಿಯ ಸೇವೆಗೆ ಸಂಬಂಧಿಸಿದಂತೆ ಕಲೆ, ಸಂಸ್ಕೃತಿ ಮತ್ತು ಸಾಹಿತ್ಯ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿ, ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರಿಗೆ ಪ್ರತಿ ತಿಂಗಳು 2,000 ರೂ.ಗಳ ಮಾಶಾಸನವನ್ನು ನೀಡುವ ಯೋಜನೆಯನ್ನು ಈ ಹಿಂದೆ ಜಾರಿಗೆ ತಂದಿದ್ದು, ಆಸಕ್ತ ಅರ್ಹ ಕಲಾವಿದರು ಹಾಗೂ ಸಾಹಿತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಗೆ ವರ್ಷಪೂರ್ತಿ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಕನಿಷ್ಠ 58 ವರ್ಷ ಪೂರ್ಣಗೊಂಡಿರುವ, 25 ವರ್ಷಗಳ ಕಾಲ ಕಲೆ, ಸಂಸ್ಕೃತಿ ಮತ್ತು ಸಾಹಿತ್ಯ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಹಾಗೂ ವಾರ್ಷಿಕ ಆದಾಯ 1 ಲಕ್ಷ ರೂ. ಮಿತಿಯಲ್ಲಿರುವ ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಉಡುಪಿ ದೂರವಾಣಿ ಸಂಖ್ಯೆ: 0820-2986168 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.