ಬಂಟ್ವಾಳ: ಕೆಎಸ್ಸಾರ್ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ನಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ ಫರಂಗಿಪೇಟೆ ಸಮೀಪದ ಮಾರಿಪಳ್ಳದಲ್ಲಿ ಭಾನುವಾರ ರಾತ್ರಿ ನಡೆದಿದೆ.
ಮೃತಪಟ್ಟವರನ್ನು ಬೆಂಜನಪದವು ನಿವಾಸಿ ನಯನ್ ಕುಮಾರ್ (22).
ಕಡೆಗೋಳಿ ಭಾಗದಿಂದ ಮಂಗಳೂರು ಕಡೆಗೆ ತೆರಳುವ ಸಂದರ್ಭ ಬಸ್ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.