ಉಡುಪಿ: ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಪ್ರತ್ಯೇಕ ಉದ್ದಿಮೆ ಪರವಾನಿಗೆ.

ಉಡುಪಿ: ನಗರಾಭಿವೃದ್ಧಿ ಇಲಾಖೆಯು ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಪ್ರತ್ಯೇಕ ಪರವಾನಿಗೆ ಪಡೆಯಲು ರಾಜ್ಯಪತ್ರವನ್ನು ಹೊರಡಿಸಿರುವುದರಿಂದ, ನೀತಿಯನ್ನು ರಾಜ್ಯದ ಎಲ್ಲಾ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತ್‌ಗಳಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಹಿನ್ನೆಲೆ, ಉಡುಪಿ ನಗರಸಭಾ ವ್ಯಾಪ್ತಿಯಲ್ಲಿರುವ ತಂಬಾಕು ಉತ್ಪನ್ನಗಳ ದಾಸ್ತಾನು ಹಾಗೂ ಮಾರಾಟ ಉದ್ದಿಮೆಗಳಿಗೆ ಪ್ರತ್ಯೇಕ ಉದ್ದಿಮೆ ಪರವಾನಿಗೆಯನ್ನು ಪಡೆದುಕೊಳ್ಳುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.