ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ನೇಮಕಾತಿ: ಅರ್ಜಿ ಆಹ್ವಾನ

ಉಡುಪಿ: ಉಡುಪಿ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ಕರ್ನಾಟಕ ಕಾನೂನು ಅಧಿಕಾರಿಗಳು (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು, 1977 ರ ನಿಯಮ 26(3) ರಡಿ ಹುದ್ದೆಯ ಪ್ರಭಾರವನ್ನು ವಹಿಸಿಕೊಳ್ಳುವ ದಿನಾಂಕದಿಂದ ಜಾರಿಗೆ ಬರುವಂತೆ ಒಂದು ವರ್ಷದ ಅವಧಿಗೆ ನೇಮಕಾತಿ ಮಾಡಿಕೊಳ್ಳಲು, ಹತ್ತು ವರ್ಷಗಳ ಕಾಲ ವಕೀಲ ವೃತ್ತಿಯನ್ನು ಪೂರೈಸಿದ ಅರ್ಹ ಆಸಕ್ತ ವಕೀಲರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜುಲೈ 25 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿ ಕಚೇರಿಯ ಆಡಳಿತ ಶಾಖೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.