ಉಡುಪಿ: ಜಿಲ್ಲೆಯ ಉಡುಪಿ, ಕುಂದಾಪುರ, ಬೈಂದೂರು ಮತ್ತು ಹೆಬ್ರಿ ತಾಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೆ ಇಂಗ್ಲೀಷ್ ಕಲಿಕೆಗಾಗಿ ಗೌರವಧನದ ಆಧಾರದ ಮೇಲೆ ಅತಿಥಿ ಶಿಕ್ಷಕರ ನೇಮಕಾತಿಗಾಗಿ ಡಿ.ಎಡ್ ಕೋರ್ಸ್ನಲ್ಲಿ ಇಂಗ್ಲೀಷ್ ಐಚ್ಛಿಕ ಭಾಷಾ ವಿಷಯವನ್ನು ಅಧ್ಯಯನ ಮಾಡಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜುಲೈ 25 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಯೋಜನಾ ಸಮನ್ವಯಾಧಿಕಾರಿ, ಐ.ಟಿ.ಡಿ.ಪಿ ಕಛೇರಿ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 0820-2574814 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.