ಉತ್ತರ ಕನ್ನಡ, ಕೊಡಗು ಜಿಲ್ಲೆಯಲ್ಲಿ ಇಂದು (ಜು.15) ಶಾಲಾ-ಕಾಲೇಜಿಗಳಿಗೆ ರಜೆ ಘೋಷಣೆ.

ಭಾರಿ ಮಳೆ ಹಿನ್ನಲೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ಧಾಪುರ, ಯಲ್ಲಾಪುರ, ದಾಂಡೇಲಿ  ಹಾಗೂ ಜೋಯಿಡಾ ತಾಲೂಕಿನಾದ್ಯಂತ ಎಲ್ಲ ಸರ್ಕಾರಿ, ಸರ್ಕಾರಿ ಅನುದಾನಿತ, ಅನುದಾನ ರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 15 ರಂದು ರಜೆ ನೀಡಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಆದೇಶಿಸಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ, ಶಾಲೆ-ಕಾಲೇಜಿಗೆ ರಜೆ:
ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಸೋಮವಾರ (ಜು.15ರಂದು) ಜಿಲ್ಲೆಯ ಅಂಗನವಾಡಿ ಸೇರಿದಂತೆ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ  ರಂಗಧಾಮಪ್ಪ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನಟರಾಜು ತಿಳಿಸಿದ್ದಾರೆ.