ಸಿ.ಎಂ ತವರು ಜಿಲ್ಲೆಯ ಜಿಲ್ಲಾಧಿಕಾರಿ ಸೇರಿ ಮೂರು ಮಂದಿ ವರ್ಗಾವಣೆ: ಅಧಿಕಾರಿಗಳ ದಿಢೀರ್ ವರ್ಗಾವಣೆ

ರಾಜ್ಯ : ಐಎಎಸ್‌ ಅಧಿಕಾರಿಗಳ ವರ್ಗಾವಣೆಗೆ ಇನ್ನಷ್ಟು ವೇಗ ದೊರೆತಿದೆ. ಸಿ.ಎಂ ತವರು ಜಿಲ್ಲೆಯ ಜಿಲ್ಲಾಧಿಕಾರಿ ಸೇರಿದಂತೆ ಮೂರು ಮಂದಿ ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಮಾಡಲಾಗಿದೆ.

ಇದೀಗ  ಶಿವಮೊಗ್ಗ ಜಿಲ್ಲೆಯ ಜಿಲ್ಲಾಧಿಕಾರಿ ಕೆ.ಎ. ದಯಾನಂದ ಅವರನ್ನು ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶನಾಲಯದ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ.  ಶಿವಮೊಗ್ಗ ಜಿಲ್ಲಾಧಿಕಾರಿ ಹುದ್ದೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ  ಜಂಟಿ ಕಾರ್ಯದರ್ಶಿ ಕೆ.ಬಿ. ಶಿವಕುಮಾರ್‌ ಅವರನ್ನು ನೇಮಕ ಮಾಡಿ ಆದೇಶಿಸ ಹೊರಡಿಸಲಾಗಿದೆ.

ಉಳಿದಂತೆ ರಾಮನಗರ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಎಂ.ಪಿ. ಮುಲ್ಲೈ ಮುಹಿಲನ್‌ ಅವರನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಸೇವೆಗಳು) ಸರ್ಕಾರದ ಉಪ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.