ಉಡುಪಿ: ವ್ಯಕ್ತಿಯೊಬ್ಬ ಮನೆ ಹತ್ತಿರ ಎಲೆಕ್ಟ್ರಿಷಿಯನ್ ಕೆಲಸ ಮಾಡುತ್ತಿದ್ದು, ಈ ವೇಳೆ ವಿದ್ಯುತ್ ಆಘಾತದಿಂದ ಗಂಭೀರವಾಗಿ ಗಾಯ ಗೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೃತರನ್ನು ಮೂಡನಿಡಂಬೂರು ಗ್ರಾಮದ ಗಣೇಶ್ ಭಂಡಾರಿ(58) ಎಂದು ಗುರುತಿಸಲಾಗಿದೆ.
ಜು.10ರಂದು ಇವರು ಮನೆ ಹತ್ತಿರದಲ್ಲಿ ಎಲೆಕ್ಟ್ರಿಷಿಯನ್ ಕೆಲಸವನ್ನು ಮಾಡುತ್ತಿದ್ದು, ಆಗ ಆಕಸ್ಮಿಕವಾಗಿ ವಿದ್ಯುತ್ ಪ್ರವಾಹಿಸಿ ಕೆಳಗೆ ಬಿದ್ದಿದ್ದು, ಈ ವೇಳೆ ಅವರ ಕುತ್ತಿಗೆಯು ಸಿಮೆಂಟ್ ಕಟ್ಟೆಗೆ ತಾಗಿ ಗಂಭೀರವಾಗಿ ಗಾಯಗೊಂಡದ್ದರು. ಆದರೆ ಜು.18ರಂದು ಸಂಜೆ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಉಡುಪಿ ಅಜ್ಜರಕಾಡು ಆಸ್ಪತ್ರೆಯಲ್ಲಿ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.