ಕುಂದಾಪುರ; ಚಾಲಕನ ನಿಯಂತ್ರಣ ತಪ್ಪಿ ಚರಂಡಿಗಿಳಿದ ಬಸ್; ಹಲವು ವಿದ್ಯಾರ್ಥಿಗಳಿಗೆ ಗಾಯ

ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ವೊಂದು ಚರಂಡಿಗಿಳಿದ ಪರಿಣಾಮ ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.ಕೊಲ್ಲೂರು ಸಮೀಪದ ದಳಿಮುರ್ಕ್ಕು ಬಳಿ ಇಂದು ಬೆಳಿಗ್ಗೆ ಘಟನೆ ನಡೆದಿದೆ. ಬಸ್ ಶಿವಮೊಗ್ಗ ಕಡೆಯಿಂದ ಬೈಂದೂರು ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.

Oplus_0

ಬಸ್ಸಿನಲ್ಲಿ ಕೊಲ್ಲೂರು ಮೂಕಾಂಬಿಕ ಹೈಸ್ಕೂಲ್ ನ 6 ವಿದ್ಯಾರ್ಥಿಗಳು ಹಾಗೂ ಪಿಯುಸಿಯ 11 ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು, ಕುಂದಾಪುರ ತಾಲೂಕು ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಈ ಪೈಕಿ ಐವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾಗಿದೆ.ಘಟನಾ ಸ್ಥಳಕ್ಕೆ ಉಡುಪಿ ಜಿಲ್ಲಾ ಹೆಚ್ಚುವರಿ ಎಸ್ಪಿ ಎಸ್.ಟಿ. ಸಿದ್ದಲಿಂಗಪ್ಪ, ಕೊಲ್ಲೂರು ಠಾಣೆಯ ಪಿಎಸ್‌ಐಗಳಾದ ವಿನಯ್ ಎಂ. ಕೊರ್ಲಹಳ್ಳಿ, ಸುಧಾರಾಣಿ ಹಾಗೂ ಸಿಬ್ಬಂದಿಗಳು ಭೇಟಿ ನೀಡಿದ್ದಾರೆ. ಅಪಘಾತದಿಂದ ಮಕ್ಕಳು ಕಂಗಾಲಾಗಿದ್ದು ಬೈಂದೂರು ಬಿಇಒ ನಾಗೇಶ್ ನಾಯಕ್ ಹಾಗೂ ಹೆಚ್ಚುವರಿ ಎಸ್ಪಿ ಶಾಲೆಗೆ ಭೇಟಿ ನೀಡಿ ಧೈರ್ಯ ತುಂಬಿದ್ದಾರೆ. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Oplus_0
Oplus_0
Oplus_0