ಅಲೆವೂರು: ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

ಉಡುಪಿ: ನೆಹರೂ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಅಸೋಸಿಯೇಷನ್ ಅಲೆವೂರು, ಹೃದಯಮ್ ಫೌಂಡೇಷನ್ ಉಡುಪಿ ಇದರ ಜಂಟಿ ಆಶ್ರಯದಲ್ಲಿ ಮಣಿಪಾಲದ ಕೆಎಂಸಿ ಸಮುದಾಯ ವೈದ್ಯಕೀಯ ವಿಭಾಗದ ವತಿಯಿಂದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಅಲೆವೂರಿನ ಸಿಎ ಬ್ಯಾಂಕ್‌ನ ಸಮೃದ್ಧಿ ಸಭಾಭವನದಲ್ಲಿ ಆಯೋಜಿಸಲಾಗಿತ್ತು.

Oplus_0

ಈ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಹೃದಯಮ್ ಫೌಂಡೇಷನ್‌ನ ಪ್ರವರ್ತಕ ಸುಭಾಷ್ ಸಾಲಿಯಾನ್ ಅವರು, ಜನರು ತಮ್ಮ ಆರೋಗ್ಯ ತಪಾಸಣೆ ನಡೆಸಲು ಅಸಡ್ಡೆ ತೋರಬಾರದು. ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡುವುದರಿಂದ ಉತ್ತಮ‌ ಆರೋಗ್ಯ ಕಾಪಾಡಿಕೊಳ್ಳಬಹುದು‌. ಸಂಘ ಸಂಸ್ಥೆಗಳು ಇಂತಹ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸುವುದು ಶ್ಲಾಘನೀಯವಾದುದು ಎಂದರು.

Oplus_0

ಮುಖ್ಯ ಅತಿಥಿಗಳಾಗಿ ಕೆಎಂಸಿ ಮಣಿಪಾಲದ ವೈದ್ಯರಾದ ಶಿಕಾ, ಸಂಸ್ಥೆಯ ಅಧ್ಯಕ್ಷರಾದ ದಯಾನಂದ ಪೂಜಾರಿ, ಕೊರಂಗ್ರಪಾಡಿ ಸಿಎ ಬ್ಯಾಂಕಿನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ವಿಜಯಲಕ್ಷ್ಮೀ, ಅಲೆವೂರು ಗಣೇಶೋತ್ಸವ ಸಮಿತಿಯ ಕಾರ್ಯದರ್ಶಿ ಸಂತೋಷ ಪೈ, ದಯಾನಂದ ಅಂಚನ್, ಸತೀಶ್‌ ಪೂಜಾರಿ,  ಮುರಳೀಧರ್ ಭಟ್ ,ಜಯಕರ್ ಪೂಜಾರಿ ಉಪಸ್ಥಿತರಿದ್ದರು.

Oplus_0

ಸಮಾರಂಭದಲ್ಲಿ ಸಂಸ್ಥೆಯ ಗೌರವಾಧ್ಯಕ್ಷ ಅಲೆವೂರು ಹರೀಶ್ ಕಿಣಿ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಸತೀಶ್ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಗುರುರಾಜ್ ಸಾಮಗ ವಂದಿಸಿದರು.
ಈ ಸಂದರ್ಭದಲ್ಲಿ ಇಸಿಜಿ , ರಕ್ತದೊತ್ತಡ, ಮಧುಮೇಹ, ರಕ್ತದ ಹಿಮೋಗ್ಲೋಬಿನ್, ಸ್ತನ ಹಾಗೂ ಗರ್ಭಕೋಶದ ತಪಾಸಣೆ, ಚರ್ಮವ್ಯಾದಿ ತಪಾಸಣೆ ಸಹಿತ ಉಚಿತ ಔಷಧಿಯನ್ನೂ ನೀಡಲಾಯಿತು.

Oplus_0
Oplus_0
Oplus_0
Oplus_0