ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ: ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ
ನಿರ್ದೇಶನಾಲಯದ ವತಿಯಿಂದ ಬೆಂಗಳೂರಿನ ಕರ್ನಾಟಕ ಹಜ್ಭವನದಲ್ಲಿ ಐ.ಎ.ಎಸ್ ಹಾಗೂ ಕೆ.ಎ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ಪರೀಕ್ಷಾ ಪೂರ್ವ ತರಬೇತಿಯನ್ನು ನೀಡಲಾಗುತ್ತಿದ್ದು, ಸದರಿ ತರಬೇತಿಗೆ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಹಾಗೂ ಪಾರ್ಸಿ ಸಮುದಾಯಕ್ಕೆ ಸೇರಿದ ಪದವಿ ಪಡೆದಿರುವ ೨೧ ರಿಂದ ೩೫
ವರ್ಷದೊಳಗಿನ ಅರ್ಹ ಅಭ್ಯರ್ಥಿಗಳಿಂದ ಸೇವಾ-ಸಿಂಧು ತಂತ್ರಾಂಶ https://sevasindhu.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಆಗಸ್ಟ್ ೩೧ ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ:8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ
ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ ದೂ.ಸಂಖ್ಯೆ:0820- 2573596 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.