ವ್ಯವಸ್ಥಾಪನ ಸಮಿತಿ ರಚನೆ: ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆ ಅಧಿನಿಯಮದ ಅನ್ವಯ ಜಿಲ್ಲೆಯಲ್ಲಿರುವ ಪ್ರವರ್ಗ ಬಿ ಯ-4 ಮತ್ತು ಪ್ರವರ್ಗ ಸಿ ಯ-38 ದೇವಸ್ಥಾನಗಳಲ್ಲಿ ಮೂರು ವರ್ಷಗಳ ಅವಧಿಗೆ ವ್ಯವಸ್ಥಾಪನ ಸಮಿತಿಯನ್ನು ರಚಿಸಲು ಆಸಕ್ತ ಭಕ್ತಾದಿಗಳು ಹಾಗೂ ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಕನಿಷ್ಠ 25 ವರ್ಷ ವಯಸ್ಸಾಗಿರುವ ಆಸಕ್ತ ಭಕ್ತಾದಿಗಳು ಯಾವುದೇ ಒಂದು ಅಧಿಸೂಚಿತ ಸಂಸ್ಥೆ ಅಥವಾ ದೇವಾಲಯದ ವ್ಯವಸ್ಥಾಪನಾ ಸಮಿತಿಗೆ ಮಾತ್ರ ಸದಸ್ಯತ್ವ ಕೋರಿ ಆಗಸ್ಟ್ 24 ರ ಒಳಗಾಗಿ ಭರ್ತಿ ಮಾಡಿದ ಅರ್ಜಿಯನ್ನು ನೇರವಾಗಿ ಸಹಾಯಕ ಆಯುಕ್ತರು, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ, ಕೊಠಡಿ ಸಂಖ್ಯೆ 206 ಬಿ, ಮೊದಲನೇ ಮಹಡಿ, ಜಿಲ್ಲಾ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ಇಲ್ಲಿಗೆ ಸಲ್ಲಿಸಬಹುದಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿಗಳ ಕಛೇರಿ ಅಥವಾ ಸಹಾಯಕ ಆಯುಕ್ತರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.