ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ಕೃಷಿ ಪ್ರಶಸ್ತಿ ಯೋಜನೆಯನ್ನು ಆರಂಭಿಸಲಾಗಿದ್ದು, ಮುಂಗಾರು ಭತ್ತದ ಬೆಳೆಗೆ ರೈತರು ಹಾಗೂ ರೈತ ಮಹಿಳೆಯರಿಂದ ಬೆಳೆ ಸ್ಪರ್ಧೆಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕೃಷಿ ಇಲಾಖೆಯ ಕೆ-ಕಿಸಾನ್ ಪೋರ್ಟಲ್ನಲ್ಲಿ ನೂತನವಾಗಿ ಕೃಷಿ ಪ್ರಶಸ್ತಿಗೆ ಅರ್ಜಿ ನಮೂನೆಯನ್ನು ಅಳವಡಿಸಲಾಗಿದ್ದು, ಸಿಟಿಝನ್ ಲಾಗಿನ್ ಅಥವಾ ಆರ್.ಎಸ್.ಕೆ ಲಾಗಿನ್ ಮೂಲಕ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸೇವಾ ಕೇಂದ್ರದಲ್ಲಿ ಆಸಕ್ತ ರೈತ ಹಾಗೂ ರೈತ ಮಹಿಳೆಯರು ಪ್ರತ್ಯೇಕವಾಗಿ ಅಗತ್ಯ ಮಾಹಿತಿಯೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.