ಉಡುಪಿ: ಇಲ್ಲಿನ ಅಂಬಲಪಾಡಿ ಎಂಬಲ್ಲಿ ಅನುಮತಿ ಇಲ್ಲದೆ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಉಡುಪಿ ನಗರ ಠಾಣೆಯ ಪೊಲೀಸರು ದಾಳಿ ನಡೆಸಿ 9 ಕೋಳಿಗಳನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸರು ಕಂಡ ಸ್ಥಳೀಯರು ಹಾಗೂ ಜೂಜುಕೋರರು ಅಲ್ಲಿಂದ ಕಾಲ್ಕಿತ್ತಿದ್ದಾರೆ.
ಮಾರಿ ಹಬ್ಬದ ಹಿನ್ನೆಲೆಯಲ್ಲಿ ಕೋಳಿ ಅಂಕ ನಡೆಯುತ್ತಿತ್ತು. ಆದರೆ ಈ ಬಾರಿ ಕೋಳಿ ಅಂಕವನ್ನು ಅನುಮತಿ ಇಲ್ಲದೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಪೊಲೀಸರು ಕೋಳಿ ಅಂಕಕ್ಕೆ ದಾಳಿ ನಡೆಸಿ ಕೋಳಿಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.