ಹಿರಿಯಡಕ: ಹಿರಿಯಡಕ ಜಂಕ್ಷನ್ ಬಳಿ ಬಸ್ ಟೈಮಿಂಗ್ ವಿಚಾರದಲ್ಲಿ ಗಲಭೆ ಸೃಷ್ಟಿಸಿ ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಡಿಕೊಂಡ ಬಗ್ಗೆ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ.
ಟೈಮಿಂಗ್ ವಿಚಾರದಲ್ಲಿ ಬಸ್ ಅನ್ನು ರಸ್ತೆಯಲ್ಲಿ ಅಡ್ಡಲಾಗಿ ನಿಲ್ಲಿಸಿ ಗಲಭೆ ಸೃಷ್ಟಿಸಿದ ಶಶಿಕಾಂತ್ (25) ರಾಜೇಶ್ (35) ಉಮೇಶ್ (54) ಮತ್ತು ಪ್ರಶಾಂತ್ (40) ವಿರುದ್ಧ ಹಿರಿಯಡಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.