ಉಡುಪಿ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕದಿಂದ ಗ್ರಂಥ ಪಾಲಕರ ದಿನಾಚರಣೆಯ ಪ್ರಯುಕ್ತ ಸೋಮವಾರ ಉಡುಪಿಯ ಅಜ್ಜರಕಾಡಿನ ಕೇಂದ್ರ ಗ್ರಂಥಾಲಯದ ಕಚೇರಿಯಲ್ಲಿ ನಗರ ಮುಖ್ಯ ಗ್ರಂಥಾಲಯ ಅಧಿಕಾರಿ ನಳಿನಿ ಜಿ.ಐ. ಹಾಗೂಜಿಲ್ಲಾ ಕೇಂದ್ರ ಗ್ರಂಥಾಲಯದ ಪ್ರಥಮ ದರ್ಜೆ ಸಹಾಯಕಿ ಪ್ರೇಮಾ ಎಂ. ಇವರನ್ನು ಕ ಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್. ಪಿ. ಅವರು ಗೌರವಿಸಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಕಾಪು ತಾಲೂಕು ಘಟಕದ ಅಧ್ಯಕ್ಷ ಪುಂಡಲೀಕ ಮರಾಠೆ, ಜಿಲ್ಲಾ ಕ ಸಾಪ ಸಹಕಾರ್ಯದರ್ಶಿ ಮೋಹನ್ ಉಡುಪ ಹಂದಾಡಿ, ಉಡುಪಿ ತಾಲೂಕು ಘಟಕದ ಗೌರವ ಕಾರ್ಯದರ್ಶಿಗಳಾದ ಜನಾರ್ದನ್ ಕೊಡವೂರು, ರಂಜಿನಿ ವಸಂತ್ ಸದಸ್ಯರಾದ ವಸಂತ್, ಮನೆಯೇ ಗ್ರಂಥಾಲಯದ ಸಂಚಾಲಕರಾದ ರಾಘವೇಂದ್ರ ಪ್ರಭು ಕರ್ವಾಲು ಮತ್ತು ಇತರರು ಉಪಸ್ಥಿತರಿದ್ದರು.