ಉಡುಪಿ: ಜಿಲ್ಲೆಯಲ್ಲಿ ಸುರಿದ ನಿರಂತರ ಗಾಳಿ ಮಳೆಗೆ ವಾಸಿಸುವ ಮನೆಯನ್ನು ಕಳೆದುಕೊಂಡು ಸಂತ್ರಸ್ತರಾಗಿರುವ ಕೊಕ್ಕರ್ಣೆ ಗ್ರಾಮ ಪಂಚಾಯ್ತಿಯ ಗಿರಿಜಾ ಪೂಜಾರ್ತಿ ಅವರಿಗೆ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಉಡುಪಿ ಜಿಲ್ಲಾ ಘಟಕದ ವತಿಯಿಂದ ಆರ್ಥಿಕ ನೆರವು, ಔಷಧಿ ಮತ್ತು ಇತರ ಅಗತ್ಯ ಪರಿಕರಗಳನ್ನು ವಿತರಿಸಲಾಯಿತು.
ಹಾಗೆಯೇ ನೆರೆ ಸಂತ್ರಸ್ತರಿಗೆ ಅಗತ್ಯ ಪರಿಕರ ಮತ್ತು ಔಷಧಗಳನ್ನು ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ರಾಷ್ಟ್ರೀಯ ಆಡಳಿತ ಮಂಡಳಿ ಸದಸ್ಯ ಬಸ್ರೂರು ರಾಜೀವ್ ಶೆಟ್ಟಿ, ಉಡುಪಿ ಜಿಲ್ಲಾ ಘಟಕದ ಸಭಾಪತಿ ಉಮೇಶ್ ಪ್ರಭು, ಉಪಸಭಾಪತಿ ಅಶೋಕ್ ಕುಮಾರ್ ಮೊದಲಾದವರು ಇದ್ದರು.