ಉಡುಪಿ: ಎಂ.ಜಿ.ಎಂ ಸಂಧ್ಯಾ ಕಾಲೇಜು ಉಡುಪಿ ಇಲ್ಲಿನ 2024-25ನೇ ಸಾಲಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮವು ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಿತು.
ಕಾಲೇಜಿನ ಪ್ರಾಂಶುಪಾಲ ಡಾ.ದೇವಿದಾಸ್ ಎಸ್.ನಾಯ್ಕ್ ಕಾರ್ಯಕ್ರಮವನ್ನು ಉದ್ಘಾಟಿಸಿ, ಕಾಲೇಜಿನ ಶ್ರೀಮಂತ ಇತಿಹಾಸ, ಅತ್ಯಾಧುನಿಕ ಮೂಲಸೌಕರ್ಯ ಮತ್ತು ಕಾಲೇಜಿನಲ್ಲಿ ಲಭ್ಯವಿರುವ ವಿವಿಧ ಸೌಲಭ್ಯಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಿ ಮಾತನಾಡಿದರು.
ಬಿಸಿಎ ವಿಭಾಗದ ಸಂಯೋಜಕ ಡಾ.ಎಂ.ವಿಶ್ವನಾಥ ಪೈ ಉಪಸ್ಥರಿದ್ದರು. ಬಿಕಾಂ ವಿಭಾಗದ ಸಂಯೋಜಕಿ ಡಾ.ಮಲ್ಲಿಕಾ ಶೆಟ್ಟಿ ಸ್ವಾಗತಿಸಿ, ವಾಣಿಜ್ಯ ವಿಭಾಗದ ಉಪನ್ಯಾಸಕಿ ಕುಮಾರಿ ಕಾವ್ಯ ವಂದಿಸಿದರು.












