ಬೆಂಗಳೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿರುವುದರ ವಿರುದ್ಧ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಆಗಸ್ಟ್ 29ಕ್ಕೆ ಮುಂದೂಡಿದೆ.
ಕರ್ನಾಟಕ ಹೈಕೋರ್ಟ್ ನಲ್ಲಿ ಸಿಎಂ ಪರ ವಕೀಲರು ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ ಪ್ರಕರಣದ ವಿಚಾರಣೆಯನ್ನು ಆಗಸ್ಟ್ 29ಕ್ಕೆ ಮುಂದೂಡಿದೆ. ಇದೇ ವೇಳೆ ಜನಪ್ರತಿನಿಧಿಗಳ ಕೋರ್ಟ್ನ ಆದೇಶವನ್ನು ಆಗಸ್ಟ್ 29ಕ್ಕೆ ಮುಂದೂಡುವಂತೆ ಸೂಚಿಸಿದ್ದು ಈ ಮೂಲಕ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.
ಸಿಎಂ ಸಿದ್ದರಾಮಯ್ಯ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದರೆ, ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪರ ವಕೀಲ, ಕೇಂದ್ರ ಸರ್ಕಾರದ ಸಾಲಿಸಿಟರ್ ಜನರಲ್ ಆಗಿರುವ ತುಷಾರ್ ಮೆಹ್ತಾ ಅವರು ವಾದ ಮಂಡಿಸಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಮೂರ್ತಿಗಳು ವಿಚಾರಣೆ ಮುಂದೂಡಿದರು.