ಬೆಳ್ತಂಗಡಿಯ ನೆರೆ ಪೀಡಿತ ಪ್ರದೇಶಗಳಿಗೆ ಜನಪ್ರತಿನಿಧಿ, ಅಧಿಕಾರಿಗಳ ಭೇಟಿ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಕೊಲ್ಲಿ ಹಾಗೂ ಕಿಲ್ಲೂರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಲೋಕಸಭಾ ಸದಸ್ಯ‌ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಹರೀಶ್ ಪೂಂಜ, ಮಾನ್ಯ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಾಲೂಕು ದಂಡಾಧಿಕಾರಿ ಹಾಗೂ ಇನ್ನಿತರ ಅಧಿಕಾರಿ ವರ್ಗ ಭೇಟಿ ನೀಡಿ ಪರಿಶೀಲನೆ ನಡೆಸಿದರು.