ಉಡುಪಿ ಆಗಸ್ಟ್ 22-30: ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ- ಸಂಜೀವಿನಿ, ಜಿಲ್ಲಾ ಪಂಚಾಯತ್, ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠ ಉಡುಪಿ ಇವರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಆಗಸ್ಟ್ 22 ರಿಂದ 30 ರ ವರೆಗೆ ಉಡುಪಿಯ ಶ್ರೀ ಕೃಷ್ಣ ಮಠದ ಗೀತಾ ಮಂದಿರದಲ್ಲಿ ಸಂಜೀವಿನಿ ಸ್ವ-ಸಹಾಯ ಗುಂಪಿನ ಮಹಿಳೆಯರು ತಯಾರಿಸಿದ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ನಡೆಯಲಿದೆ.
ಮಾರಾಟ ಮೇಳದಲ್ಲಿ ಸಂಜೀವಿನಿ ಸ್ವ-ಸಹಾಯ ಗುಂಪಿನ ಮಹಿಳೆಯರು ತಯಾರಿಸಿದ ಟೆರೇಕೋಟಾ ವಸ್ತುಗಳು, ಕೃತಕ ಆಭರಣ, ಹ್ಯಾಂಡ್ ಮೇಡ್ ಬ್ಯಾಗ್, ಬಿದಿರಿನ ಬುಟ್ಟಿ, ತೆಂಗಿನ ಚಿಪ್ಪಿನ ವಿವಿಧ ಕಲಾಕೃತಿಗಳು, ಅಲಂಕಾರಿಕ ಹೂವಿನ ಗಿಡಗಳು, ಗೊಂಬೆಗಳು, ಕೈಮಗ್ಗ ಸೀರೆ, ಇತ್ಯಾದಿ ವಸ್ತುಗಳು ಲಭ್ಯವಿದ್ದು, ಸಾರ್ವಜನಿಕರು ಸಂಜೀವಿನಿ ಸ್ವ-ಸಹಾಯ ಗುಂಪಿನ ಮಹಿಳೆಯರು
ತಯಾರಿಸಿದ ವಸ್ತುಗಳನ್ನು ಖರೀದಿಸಿ ಮಹಿಳಾ ಉದ್ಯಮಿದಾರರಿಗೆ ಪ್ರೋತ್ಸಾಹ ನೀಡುವಂತೆ ಜಿಲ್ಲಾ ಪಂಚಾಯತ್ನ ಕಚೇರಿ ಪ್ರಕಟಣೆ ತಿಳಿಸಿದೆ.












