ಉಡುಪಿ: ಉಡುಪಿ ಜಿಲ್ಲೆಯ ಪೆರ್ಡೂರು ಎಂಬಲ್ಲಿ ನಾಯಿಯನ್ನು ಬೆನ್ನಟ್ಟಿ ಬಂದ ಚಿರತೆಯೊಂದು ಬಾವಿಗೆ ಬಿದ್ದ ಘಟನೆ ಸಂಭವಿಸಿದೆ.
ಘಟನೆ ನಡೆಯುತ್ತಿದ್ದಂತೆ ಗಾಬರಿಗೊಂಡ ಮನೆಯವರು ಮತ್ತು ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆಯನ್ನು ಮೇಲೆತ್ತುವ ಕಾರ್ಯಾಚರಣೆ ನಡೆಸಿದರು. ಹಗ್ಗದ ಮೂಲಕ ಬೋನ್ ಬಾವಿಗೆ ಇಳಿಸಿ, ಬಳಿಕ ಚಿರತೆಯನ್ನು ಸೆರೆಹಿಡಿಯಲಾಯಿತು.