ಉಡುಪಿ: ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಹಜ್ ಭವನದಲ್ಲಿ ಐ.ಎ,ಎಸ್ ಹಾಗೂ ಕೆ.ಎ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ಪರೀಕ್ಷಾ ಪೂರ್ವ ತರಬೇತಿಯನ್ನು ನೀಡಲಾಗುತ್ತಿದ್ದು, ಸದರಿ
ತರಬೇತಿಗೆ ಅರ್ಹ ಅಲ್ಪಸಂಖ್ಯಾತರ ಸಮುದಾಯದ 21 ರಿಂದ 35 ವರ್ಷದ ಪದವಿ ಅಭ್ಯರ್ಥಿಗಳಿಂದ ವೆಬ್ಸೈಟ್
https://sevasindhu.Karnataka.gov.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 10 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮೌಲಾನಾ ಆಜಾದ್ ಭವನ ಅಲೆವೂರು ರಸ್ತೆ, ಮಣಿಪಾಲ ದೂ.ಸಂಖ್ಯೆ: 0820-2573596 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.