ಕುಂದಾಪುರ: ಕುಂದಾಪುರದ ಸೈಂಟ್ ಜೋಸೆಫ್ ಶಾಲೆಯಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಯುಕ್ತಾ ಹೊಳ್ಳ ಸಂಸ್ಕೃತ ಭಾಷಣದಲ್ಲಿ ಪ್ರಥಮ, ಶುಕ್ತಿಜಾ ಸತೀಶ್ ಭರತನಾಟ್ಯದಲ್ಲಿ ಪ್ರಥಮ, ಸುಮಂತ್ ಭಟ್ ಮತ್ತು ತರುಣ್ ಪ್ರಭು ರಸಪ್ರಶ್ನೆಯಲ್ಲಿ ಪ್ರಥಮ, ಕೆ. ಶ್ರೀನಿತಾ. ಎಸ್. ಕಾಮತ್ ರಂಗೋಲಿ ಯಲ್ಲಿ ದ್ವಿತೀಯ, ದಿವ್ಯಶ್ರೀ ಕನ್ನಡ ಚರ್ಚಾ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆಯುವುದರ ಮೂಲಕ ಅಪೂರ್ವ ಸಾಧನೆಗೆ ಸಾಕ್ಷಿಯಾಗಿದ್ದಾರೆ.
ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ , ಪ್ರಾಂಶುಪಾಲರು, ಬೋಧಕ – ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.