ಉಡುಪಿ:ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ : ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ,ವತಿಯಿಂದ ಸಂಚಾರಿ ಕುರಿಗಾಹಿಗಳಿಗೆ / ವಲಸೆ ಕುರಿಗಾರರಿಗೆ ಗುರುತಿನ ಚೀಟಿ ವಿತರಿಸುವ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದ್ದು, ಜಿಲ್ಲೆಯಲ್ಲಿರುವ ಕನಿಷ್ಠ 20 ಕುರಿ/ಮೇಕೆಗಳನ್ನು ಹೊಂದಿರುವ ಅರ್ಹ ಸಂಚಾರಿ ಕುರಿಗಾರರು / ವಲಸೆ ಕುರಿಗಾರರಿಂದ ಅರ್ಜಿ
ಆಹ್ವಾನಿಸಲಾಗಿದೆ.

ವಲಸೆ ಹೋಗುವುದಕ್ಕೆ ಸಂಬಂಧಪಟ್ಟ ಸ್ಥಳೀಯ ಗ್ರಾಮ ಲೆಕ್ಕಾಧಿಕಾರಿಗಳಿಂದ ಮಹಜರ್ ಪ್ರಮಾಣ ಪತ್ರ ಪಡೆದು, ಸೂಕ್ತ ದಾಖಲಾತಿಗಳೊಂದಿಗೆ ಸೆಪ್ಟಂಬರ್ 30 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ವಿವರಗಳಿಗಾಗಿ ಸ್ಥಳೀಯ ಪಶು ಚಿಕಿತ್ಸಾಲಯ / ಪಶು ಆಸ್ಪತ್ರೆಯ ಪಶುವೈದ್ಯಾಧಿಕಾರಿರವರನ್ನು ಅಥವಾ ಆಯಾ ತಾಲೂಕು ಪಶು ಆಸ್ಪತ್ರೆಯ ಮುಖ್ಯ ಪಶುವೈದ್ಯಾಧಿಕಾರಿಗಳನ್ನು ಅಥವಾ ಉಪನಿರ್ದೇಶಕರು (ಆಡಳಿತ), ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಉಡುಪಿ ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.